ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತೀಚೆಗೆ ಬೈಂದೂರು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಗೋಕಳ್ಳತನ ಹೆಚ್ಚಾಗಿ ನಡೆಯುತ್ತಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಗೋ ಪ್ರೇಮಿಗಳೊಂದಿಗೆ ಸೇರಿ ಬೀದಿಗಿಳಿದು ಹೋರಾಟಮಾಡಲಾಗುವುದು ಎಂದು ವಿಶ್ವಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೆ ಬೇಕಾದ ಸಹಕಾರವನ್ನು ನೀಡಲು ಸಂಘವು ಬದ್ಧರಾಗಿದ್ದು ವ್ಯವಸ್ಥಿತವಾಗಿ ನಡೆಯುತ್ತಿರುವ ಈ ಗೋಕಳ್ಳತನವನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಸುಧಾಕರ ಶೆಟ್ಟಿ ನೆಲ್ಯಾಡಿ, ಜಗದೀಶ ಕೊಲ್ಲೂರು, ಸುಕುಮಾರ ಹೆಮ್ಮಾಡಿ, ರಾಘವೇಂದ್ರ ಹೊಸಾಡು, ಗಿರೀಶ್ ಶಿರೂರು, ಸತೀಶ್ ಜೋಗಿ ಕಟ್ಬೆಲ್ತೂರು, ಕಿರಣ್ ತ್ರಾಸಿ, ಪ್ರಶಾಂತ ಪಡುವರಿ, ಗುರುರಾಜ್ ಕಲ್ಲುಕಂಠ, ಜಗದೀಶ್ ಆಲಂದೂರು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.