Kundapra.com ಕುಂದಾಪ್ರ ಡಾಟ್ ಕಾಂ

ಫೆ.10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಳ್ಮಣ್:
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ.

ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಗಂಟೆ 8.00ರಿಂದ “ಸಂತ ಸಮಾಗಮ” ಧಾರ್ಮಿಕ ಸಭೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಾರತಭೂಷಣ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಮಹಾ ಸ್ವಾಮೀಜಿ, ಶ್ರೀಧಾಮ ಮಾಣಿಲ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ, ಗುರುಪುರ ಕ್ಷೇತ್ರ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಬಲ್ಯೊಟ್ಟು ಮಠದ ಪರಮಪೂಜ್ಯ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಗುರುಪುರ ಜಂಗಮ ಮಠದ ಪರಮಪೂಜ್ಯ ಶ್ರೀ ಶ್ರೀ ಮ.ನಿ.ಪ್ರ. ರುದ್ರಮುನಿ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಕರಿಂಜೆ ಓಂ ಶ್ರೀ ಗುರುಮಠದ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶ್ವ ಹಿಂದು ಪರಿಷತ್ನ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಧಾರ್ಮಿಕ ಭಾಷಣ ಮಾಡಲಿದ್ದು, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.

ರಾತ್ರಿ ಗಂಟೆ 10.00ರಿಂದ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಮತ್ತು ರಂಗ್ದ ರಾಜೆ ಸುಂದರ್ ರೈ ಅಭಿನಯದ ‘ಅಮ್ಮೆರ್’ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಹರೀಶ್ ಸಚ್ಚೇರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version