ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ನಡೆಯಿತು. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕುಂದಾಪುರ ತಾಲೂಕು ಇದರ ಪ್ರಭಾರ ಸಹಾಯಕ ನಿರ್ದೇಶಕ, ವಂಡ್ಸೆ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್.ವಿ.ಇಬ್ರಾಹೀಂಪುರ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ ಆತ್ರಾಡಿ, ಗ್ರಾಮ ಪಂಚಾಯತ್ ಸದಸ್ಯರಾದ ಉದಯ ಕೆ.ನಾಯ್ಕ್, ಗುಂಡು ಪೂಜಾರಿ ಹರವರಿ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ.ಕಾರ್ಯದರ್ಶಿ ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ, ವಂದಿಸಿದರು.