Site icon Kundapra.com ಕುಂದಾಪ್ರ ಡಾಟ್ ಕಾಂ

ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ: ಸಿಎ / ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ತಎಕ್ಸಲೆಂಟ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಸಿಎ ಮತ್ತು ಸಿಎಸ್ ಪರೀಕ್ಷೆಯಲ್ಲಿ ಉತಿರ್ಣರಾಗುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಾದ ಹೃತಿಕ್ ಎಮ್. (237), ಆಯುಷ್ (236), ದೀಕ್ಷಾ ಎ. ಶೆಟ್ಟಿ (223), ಸಮೃದ್ಧಿ ಎಸ್. ಶೆಟ್ಟಿ (218) ಮತ್ತು ಅಮೋಘ್ (202) ಅಂಕಗಳೊಂದಿಗೆ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ವೈಷ್ಣವಿ (137), ಸಹನಾ (118) ಮತ್ತು ಭೂಮಿಕಾ (112) ಅಂಕಗಳೊಂದಿಗೆ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ ಫೌಂಡೇಶನ್, ಸಿಎಸ್ ಫೌಂಡೇಶನ್ (ಸಿಎಸ್ಇಇಟಿ ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆಯ ಸಿದ್ಧತೆಯಲ್ಲಿದ್ದಾರೆ.

ಪದವಿಪೂರ್ವ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸು ಗಳಿಗೆ ಸಿದ್ಧತೆ:
ಎಕ್ಸಲೆಂಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಇಂದಲೇ ವೃತ್ತಿಪರ ಕೋರ್ಸು ಗಳಾದ ಸಿಎ ಮತ್ತು ಸಿಎಸ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ನೆರವಾಗಿದೆ. ಸಿಎ/ಸಿಎಸ್ ಫೌಂಡೇಶನ್ ಕೋರ್ಸ್ ಗಳಿಗೆ ದೇಶದ ವಿವಿಧ ಭಾಗಗಳ ಅನುಭವಿ ಶಿಕ್ಷಕರು, ಅನುಭವಿ ಲೆಕ್ಕಪರಿಶೋಧಕರ ಜೊತೆಗೆ ಅನುಭವಿ ಕಂಪನಿ ಸೆಕ್ರೆಟರಿ ಅವರು ಕೂಡ ಬೋಧಕ ಸಿಬ್ಬಂದಿಗಳಾಗಿರುವುದರಿಂದ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಉನ್ನತಿಗೆ ಅವರು ಸಹಕಾರಿಯಾಗಲಿದ್ದಾರೆ . ಪದವಿಪೂರ್ವ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸು ಗಳ ತರಬೇತಿಯನ್ನು ನೀಡಿ ಕರ್ನಾಟಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

Exit mobile version