Kundapra.com ಕುಂದಾಪ್ರ ಡಾಟ್ ಕಾಂ

ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಗಂಗೊಳ್ಳಿ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಗ್ರಾಮ ಮಟ್ಟದ ಬೇಟಿ ಬಚಾವೊ, ಬೇಟಿ ಪಡಾವೊ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆಯಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ., ಸಂಪನ್ಮೂಲ ವ್ಯಕ್ತಿಗಳಾದ ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಶಾಲೆಯ ಸಹಶಿಕ್ಷಕಿ ಉಷಾ ಕುಮಾರಿ, ಎಸ್ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸಮುದಾಯ ಆರೋಗ್ಯ ಅಧಿಕಾರಿ ನಯನಾ ತಾಂಡೇಲ, ಶಾಲೆಯ ವಿದ್ಯಾರ್ಥಿ ಅಂಶು ಖಾರ್ವಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮೊದಲಾದವರು ಉಪಸ್ಥಿತರಿದ್ದರು. ಹೆಣ್ಣು ಮಕ್ಕಳ ಜನನವನ್ನು ಸಂಭ್ರಮಿಸುವ ಸಲುವಾಗಿ ಶಾಲೆಯ ವಠಾರದಲ್ಲಿ ಸಾಂಕೇತಿಕವಾಗಿ ಗಿಡ ನೆಡಲಾಯಿತು. ಬೇಟಿ ಬಚಾವೊ, ಬೇಟಿ ಪಡಾವೊ, ಹೆಣ್ಣು ಭ್ರೂಣ ಹತ್ಯೆ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ನಿಖಿತಾ ಸ್ವಾಗತಿಸಿದರು. ರೇಖಾ ಕಾರ್ಯಕ್ರಮ ನಿರ್ವಹಿಸಿದರು. ಸಂಗೀತಾ ವಂದಿಸಿದರು.

Exit mobile version