Kundapra.com ಕುಂದಾಪ್ರ ಡಾಟ್ ಕಾಂ

ಜೆಇಇ ಮೈನ್ಸ್ ಪರೀಕ್ಷೆ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ.

ಜೆಇಇ ಮೈನ್ಸ್ 2024 ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ), ಆದಿತ್ಯ ಸಿ.ಚಂದನ್ 90.42 ಪರ್ಸಂಟೈಲ್, ಲಲನ್ ಪಿ. 90.21 ಪರ್ಸಂಟೈಲ್, ಪ್ರಜ್ವಲ್ ಎಸ್.ಪೂಜಾರಿ 89.12ಪರ್ಸಂಟೈಲ್, ರಜತ್ ಪೂಜಾರಿ 87.82 ಪರ್ಸಂಟೈಲ್, ಎನ್. ಕೌಶಿಕ್ 87.52 ಪರ್ಸಂಟೈಲ್, ಪ್ರಾಂಜಲಾ 85.24 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version