ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ
ವಿಶೇಷ ಪೂಜೆ ಸಲ್ಲಿಸಿದರು.
ದೇವಳದ ಅರ್ಚಕ ಸುಬ್ರಹ್ಮಣ್ಯ ಅಡಿಗ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ಗೃಹಸಚಿವರಿಗೆ ದೇವಿಯ ಪ್ರಸಾದ ನೀಡಿ ಗೌರವಿಸಿದರು.
ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡ ರಮೇಶ್ ಗಾಣಿಗ ಹಾಗೂ ಇನ್ನಿತರರು ಇದ್ದರು.