Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾಗಿ ಮೂವರು ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿರುವ ಸದಾಶಿವ ಡಿ. ಪಡುವರಿ, ನಾಗರಾಜ ಶೆಟ್ಟಿ ನಾಕಟ್ಟೆ ಹಾಗೂ ನಾಗರಾಜ ಗಾಣಿಗ ಬಂಕೇಶ್ವರ ಅವರು ಬುಧವಾರ ಪಟ್ಟಣ ಪಂಚಾಯತಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಸದಸ್ಯರ ಪರವಾಗಿ ಸದಾಶಿವ ಡಿ. ಪಡುವರಿ ಮಾತನಾಡಿ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯವಸ್ಥೆಯಲ್ಲಿ ಸಾಕಷ್ಟು ವೈರುಧ್ಯವಿದ್ದು, ಸಾಮಾನ್ಯ ಜನರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಜನರು ಹಾಗೂ ಸ್ಥಳೀಯ ಸರಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇವೆ ಎಂದರು.

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸೂರ್ಯಕಾಂತ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ. ಬಾಬು ಶೆಟ್ಟಿ, ಶಂಕರ ಪೂಜಾರಿ, ಪುಪ್ಪರಾಜ ಶೆಟ್ಟಿ, ಅರವಿಂದ ಪೂಜಾರಿ, ಮೋಹನ್ ಪೂಜಾರಿ, ಗಣೇಶ್ ಪೂಜಾರಿ, ವೆಂಕಟರಮಣ ದೇವಾಡಿಗ ಮೊದಲಾದವರು ಮಾತನಾಡಿದರು.

ಸದಸ್ಯರ ಹಿತೈಶಿಗಳು ಅಭಿನಂದಿಸಿದರು. ಶಿಕ್ಷಕ ಸುಧಾಕರ ಪಿ ಕಾರ್ಯಕ್ರಮ ನಿರೂಪಿಸಿದರು.

Exit mobile version