Site icon Kundapra.com ಕುಂದಾಪ್ರ ಡಾಟ್ ಕಾಂ

ಲೋಕಸಭಾ ಚುನಾವಣೆ: ಬಿಜೆಪಿಯಿಂದ ಉಡುಪಿಗೆ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮಣೆ ಹಾಕಲಾಗಿದ್ದು, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೊಕ್ ನೀಡಲಾಗಿದೆ.

ಇತರೇ ಕ್ಷೇತ್ರಗಳು:
ಮೈಸೂರು-ಯದುವೀರ್ ಒಡೆಯರ್
ಹಾವೇರಿ-ಬಸವರಾಜ ಬೊಮ್ಮಾಯಿ
ಬೆಂಗಳೂರು ಉತ್ತರ-ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ-ಪಿಸಿ ಮೋಹನ್
ಬೆಂಗಳೂರು ದಕ್ಷಿಣ-ತೇಜಸ್ವಿ ಸೂರ್ಯ
ಬೆಂಗಳೂರು ಗ್ರಾಮಾಂತರ-ಮಂಜುನಾಥ್
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ, ಗದ್ದಿಗೌಡರ
ವಿಜಯಪುರ- ರಮೇಶ್ ಜಿಗಜಿಣಿಗಿ
ಕಲಬುರಗಿ- ಉಮೇಶ ಜಾಧವ್
ಬೀದರ್- ಭಗವಂತ ಖೂಬಾ

Exit mobile version