Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಪಿಯು ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ಶೇ.94.26 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಶೇ.94.26 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 122 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 429 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 57 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಾಮರ್ಸ್ ವಿಭಾಗದಲ್ಲಿ ವೈಷ್ಣವಿ 579, ಸುಮಂತ 576, ಸಮರ್ಥ 573 ಅಂಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ ವಿಶ್ವಜಿತ್ ಕಿಣಿ 579, ಅಂಜನ್ ಪೂಜಾರಿ 576, ಸುನನ್ಯ 575, ಕಲಾ ವಿಭಾಗದಲ್ಲಿ ಅಂಕಿತ ಈರಪ್ಪ ಗೌಡರ್ 530, ಸುಜಾತ 492, ಸಂಜನಾ 488 ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Exit mobile version