Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ನಾಯಕರ ಹೆಸರು ಹೇಳಿ ಗೆಲ್ಲವವರಿಗೆ ಕ್ಷೇತ್ರದ ಅಭಿವೃದ್ಧಿಯ ಯೋಚನೆ ಇಲ್ಲ: ಕೆ. ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ: ಕ
ಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಂಸದರಾಗಿದ್ದವರು ರಾಷ್ಟ್ರೀಯ ನಾಯಕರ ಹೆಸರನ್ನು ಹೇಳಿಕೊಂಡು ಗೆದ್ದು ಕ್ಷೇತ್ರದ ಕಡೆಗೆ ಮುಖ ಮಾಡಿರಲಿಲ್ಲ. ಈಗಿನ ಅಭ್ಯರ್ಥಿಯೂ ಸಂಸದರ ಹಾದಿಯನ್ನೇ ಅನುಸರಿಸುವುದಾಗಿ ಹೇಳಿದ್ದಾರೆ. ಅವರಿಗೆ ಅಭಿವೃದ್ಧಿಯ ಬಗ್ಗೆ ಯಾವುದೇ ಯೋಜನೆ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಮಂಗಳವಾರ ಬ್ರಹ್ಮಾವರ ಪೇಟೆಯಲ್ಲಿ ರೋಡ್ ಶೋ ಬಳಿಕ ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಈ ಹಿಂದೆ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಹೇಳಿದ್ದೇನೆ. ಸಂಸದನಾದರೆ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಜನರ ಬದುಕು ಕಟ್ಟುವ ಕಾರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗವುದು ಎಂದರು.

ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳು ಮಹಿಳೆಯರು ಯುವಕರು ಹಾಗೂ ಬಡವರ್ಗದ ಬದುಕು ಕಟ್ಟುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ವೆರೋನಿಕಾ ಕರ್ನೆಲಿಯೋ, ಅಶೊಕ್ ಶೆಟ್ಟಿ, ಡಾ. ಸುನಿತಾ ಶೆಟ್ಟಿ, ದಿನಕರ ಹೇರೂರು ಉಪಸ್ಥಿತರಿದ್ದರು.

Exit mobile version