ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕಗೊಂಡಿದ್ದಾರೆ.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಬ್ಲಾಕ್ ಅಧ್ಯಕ್ಷ ಅರವಿಂದ ಪೂಜಾರಿ ಅವರು, ಪ್ರಸನ್ನ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಿರೂರು ಭಾಗದ ಯುವ ಮುಖಂಡರಾಗಿರುವ ಪ್ರಸನ್ನ, ಉದ್ಯಮದೊಂದಿಗೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

