Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಬೈಕ್ ಪಲ್ಟಿಯಾಗಿ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ರಾ.ಹೆ – 66ರ ಬಸ್ ನಿಲ್ದಾಣದ ಹತ್ತಿರ ಮಂಗಳವಾರ ನಡೆದಿದೆ. ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತ ದುರ್ದೈವಿ

ಬೆಳಿಗ್ಗೆ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಬಸ್ ನಿಲ್ದಾಣ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಸೇರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದ್ದಾರೆ.

ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version