Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ: ಶೇ.76.06 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಒಟ್ಟು ಶೇ.76.06 ಮತದಾನವಾಗಿದೆ.

ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.80 ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.79.10 ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶೇ.79.03 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶೇ.78.50 ಮತದಾನವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.80.20 ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.75.12, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.69. ತರಿಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.20 ಮತದಾನವಾಗಿದೆ.

ಜಿಲ್ಲೆಯಾದ್ಯಂತ ಹಿರಿಯ ನಾಗರಿಕರು, ವಿಕಲಚೇತನರು, ವಧು ವರರು, ಪ್ರಥಮ ಭಾರಿಗೆ ಮತದಾನ ಮಾಡುವ ಯುವ ಸಮೂಹ ಕೂಡ ಖುಷಿಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಸಣ್ಣ ಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ, ಮತ್ತೆಲ್ಲಾ ಮತಗಟ್ಟೆಗಳಲ್ಲಿಯೂ ಮತದಾನ ನಿರ್ವೀಘ್ನವಾಗಿ ನಡೆದಿದೆ.

ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಶೇ.12.82 ಮತದಾನವಾಗಿದ್ದರೇ, ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಒಟ್ಟು ಶೇ.29.03 ಮತದಾನವಾಗಿದೆ. ಮಧ್ಯಾಹ್ನ 1 ಗಂಟೆಗೆ ಒಟ್ಟು ಶೇ.46.43 ಮತದಾನ, ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಶೇ.57.49, ಸಂಜೆ 5 ಗಂಟೆಗೆ ಶೇ.72.13 ಮತದಾನವಾಗಿದ್ದರೇ, ಶೇ.77.10,ಸಂಜೆ 6 ಗಂಟೆಗೆ ಶೇ.76 ಮತದಾನವಾಗಿದೆ. ಸಂಜೆ 6 ಗಂಟೆಯ ಬಳಿಕವೂ ಕೆಲವೊಂದು ಮತಗಟ್ಟೆಗಳಲ್ಲಿ ಮತದಾನಕ್ಕೆ ಸರತಿ ಸಾಲು ಕಂಡುಬಂತು ಅಂತಿಮವಾಗಿ ಶೇ. 76.06 ಮತದಾನವಾಗಿದೆ.

Exit mobile version