Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರಿನ ವಿವಿಧೆಡೆ ಬಿಜೆಪಿ ಪೇಜ್ ಪ್ರಮುಖ್ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಮತಗಳ ಅಂತರ ಒದಗಿಸುವ ಶಾಸಕ ಗುರುರಾಜ ಗಂಟಿಹೊಳೆ ಅವರ ಸಂಕಲ್ಪದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು.

ಶಿರೂರು, ಬೈಂದೂರು ಪಟ್ಟಣ ಪಂಚಾಯಿತಿ, ಕಾವ್ರಾಡಿ, ಸಿದ್ದಾಪುರ, ಚಿತ್ತೂರು, ಕಿರುಮುಂಜೇಶ್ವರ, ತ್ರಾಸಿ, ಯಡ್ತರೆ ಸೇರಿದಂತೆ ಬೈಂದೂರಿನ ವಿವಿಧ ಭಾಗಗಲ್ಲಿ ಪೇಜ್ ಪ್ರಮುಖ್ ಕಾರ್ಯಗಾರ ನಡೆಯಿತು.

ಕಾರ್ಯಾಗಾರದಲ್ಲಿ ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version