Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಹರ್ಷ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ,ವಿದ್ಯಾರ್ಥಿ ಪೋಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version