Site icon Kundapra.com ಕುಂದಾಪ್ರ ಡಾಟ್ ಕಾಂ

ನಾಟಾ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರೀಯ ಮಟ್ಟದ NATA (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ.

ಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.

ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version