Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು
: ಮನೆಯ ಗೇಟಿನ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.

ರಾತ್ರಿ ಸುರಿದ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿ ಇದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಬೆಳಿಗ್ಗೆ ಮನೆಯೊಳಕ್ಕೆ ಸತ್ತುಹೋಗಿತ್ತು ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಗೇಟ್ ಹೊರಕ್ಕೆ ಬಂದಾಗ ಅಚಾನಕ್ಕಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ಈ ವೇಳೆ ವಿದ್ಯುತ್ ತಗುಲು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ದೊರೆತ ತಕ್ಷಣ ಈ ಭಾಗದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಮೃತರು ಮಡದಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂನ ಸಹಾಯಕ ಇಂಜಿನಿಯರ್‌ ಯಶವಂತ್‌ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಜಿಪಂ ಮಾಜಿ ಅಧ್ಯಕ್ಷ ಎಸ್.‌ ರಾಜು ಪೂಜಾರಿ, ಶಿರೂರು ಮುಖಂಡ ನೂರ್‌ ಮೊಹಮ್ಮದ್‌ ಮೊದಲಾದವರು ಈ ಸಂದರ್ಭ ಇದ್ದರು. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version