Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಗೆ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸರಕಾರಿ ಜ್ಯೂನಿಯರ್ ಕಾಲೇಜಿನ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ನಿತಿನ್ ಆಚಾರ್ ಆತ್ಮಹತ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶಾಲೆಯ ವಿರುದ್ದ ಪೋಷಕರು ತಿರುಗಿ ಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಕೆ ನಡೆಸಿ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಮಂಗಳವಾರ ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ ಬೈಂದೂರು ಆರಕ್ಷಕ ಠಾಣೆಗೆ ಮುತ್ತಿಗೆ ಹಾಕಿದ ಕುಟುಂಬಸ್ಥರು ನ್ಯಾಯ ದೊರಕುವ ತನಕವೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಎಂದು ಪಟ್ಟು ಹಿಡಿದ ಘಟನೆ ನಡೆಯಿತು.

ಸ್ಥಳಕ್ಕಾಗಮಿಸಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಈ ವೇಳೆ ಪ್ರತಿಕ್ರಿಯಿಸಿ, ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿಯಾಗಿರುವ ಕಾರಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು. ತಪ್ಪಿದಸ್ಥರ ವಿರುದ್ದ ಸ್ಪಷ್ಟತೆ ದೊರೆತಲ್ಲಿ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಪೊಲೀಸ್ ಠಾಣೆಯ ಬಳಿ ನೆರೆದಿದ್ದ ಸಾರ್ವಜನಿಕರು ಹಾಗೂ ಪೊಲೀಸ್ ಅಧಿಕಾರಿಗಳು ಕುಟುಂಬಿಕರಿಗೆ ಮನವರಿಕೆ ಮಾಡಿದ ಬಳಿಕ ವಿದ್ಯಾರ್ಥಿಯ ಶವವನ್ನು ಮರಣೋತ್ತರ ಪರೀಕ್ಷೆ ಬಳಿಕ ಮನೆಗೆ ಕೊಂಡೊಯ್ದರು.

ಈ ವೇಳೆ ಪ್ರೋಬೇಷನರಿ ಐಪಿಎಸ್ ಡಾ. ಹರ್ಷ ಪ್ರಿಯಂವದಾ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ್ ಹಾಜರಿದ್ದರು.

ಶಾಲೆಯಲ್ಲಿ ಬೈದಿದ್ದಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು https://kundapraa.com/?p=72386 .

Exit mobile version