Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ – ಕಾರ್ಯಾಗಾರ

???????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣದಲ್ಲಿ ರೌಪಿಯ ಸಭಾಂಗಣದಲ್ಲಿ ಕಿಂಡರ್ಗಾಟನ್, ಪೂರ್ವಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿ ಶಿಕ್ಷಕರಿಗೆ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಪರಿಸರತಜ್ಞೆ, ರಾಷ್ಟ್ರಮಟ್ಟದ ವಿಶೇಷ ಸಂಪನ್ಮೂಲ ವ್ಯಕ್ತಿ ಎಸ್. ಪಲ್ಲವಿ ಅವರು ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನೇ ಮತ್ತು ಗುಣಾತ್ಮಕ ಶಿಕ್ಷಣದ ಕುರಿತು ತರಬೇತಿ ನೀಡಿದರು. ಜೊತೆಯಲ್ಲಿ ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಣಕ್ಷೇತ್ರವು ಪೈಪೋಟಿಯಿಂದ ಕೂಡಿದ್ದು ಶಿಕ್ಷಕರು ವಿದ್ಯಾರ್ಥಿಗಳಿಂದ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ ಆದ್ದರಿಂದ  ವಿದ್ಯಾರ್ಥಿಸ್ನೇಹಿ ಶಿಕ್ಷಣ ಅತ್ಯಗತ್ಯ ಮತ್ತು ಈ ದಿಶೆಯತ್ತ ಶಿಕ್ಷಕರು ಸಂಯಮದಿಂದ ಸದಾ   ಕ್ರಿಯಾಶೀಲರಾಗಿರಬೇಕು ಎಂದು ಶಿಕ್ಷಕರಿಗೆ ಪ್ರಾಯೋಗಿಕವಾಗಿ ಉದಾಹರಣೆಗಳ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದರು.

 ಎಲ್ಲಾ ಶಿಕ್ಷಕರು  ಅತ್ಯಂತ ಉತ್ಸಾಹದಿಂದ ವಿವಿಧ ಚಟುವಟಿಕೆಗಳಲ್ಲಿ  ಪಾಲ್ಗೊಂಡರು. ಸಭೆಯಲ್ಲಿ  ಆಡಳಿತ ಮಂಡಳಿಯ ಅಧಿಕಾರಿಗಳಾದ ಶಮಿತಾ ರಾವ್, ರೆನಿಟಾ ಲೋಬೊ  ಮತ್ತು ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ  ಉಪಸ್ಥಿತರಿದ್ದರು.

Exit mobile version