Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ವಿಶಿಷ್ಟ ರೀತಿಯಲ್ಲಿ ಸಂಪ್ರದಾಯಬದ್ಧವಾಗಿ ಸ್ವಾಗತಿಸಿದರು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಮತ್ತು ಸಂಚಾಲಕ ಎನ್. ಸದಾಶಿವ ನಾಯಕ್ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಪಠ್ಯಪುಸ್ತಕ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ನೀಡಲಾದ ಸಮವಸ್ತ್ರ, ಬೆಲ್ಟ್‌ಗಳನ್ನು ವಿತರಿಸಿ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಜಿ.ಅಜಿತ್ ಭಟ್, ಶಾಲೆಯ ಶಿಕ್ಷಕರಾದ ಮಹಾಬಲ ಆಚಾರ್ಯ, ದೇವು, ಲಕ್ಷ್ಮೀ ಖಾರ್ವಿ, ರೇಖಾ ಖಾರ್ವಿ, ಮಮತಾ ಖಾರ್ವಿ, ಭೂದೇವಿ, ಅಕ್ಷತಾ ವಿನಯ್, ಅಂಗನವಾಡಿ ಕಾರ್ಯಕರ್ತೆ ಕಮಲಾ ಮೊದಲಾದವರು ಉಪಸ್ಥಿತರಿದ್ದರು.

Exit mobile version