ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜು.03: ಮೆಸ್ಕಾಂನ ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುವ ವೇಳೆ ವಿದ್ಯುತ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಇಂದು ತಗ್ಗರ್ಸೆ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಲೈನ್‌ಮ್ಯಾನ್ ಸಲೀಂ ಮೇ. ಅಗಸಿಮನೆ (38) ಸಾವನ್ನಪ್ಪಿದ್ದಾರೆ.
ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಸೋಮವಾರ ಮದ್ಯಾಹ್ನದ ವೇಳೆ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ ರಿಪೇರಿ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.
ಬೈಂದೂರು ಮೆಸ್ಕಾಂನಲ್ಲಿ ಕಳೆದ ಎಂಟು ವರ್ಷದಿಂದ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಲೀಂ ಅವರು ಉತ್ತರ ಕರ್ನಾಟಕದ ಮುಂಡಗೋಡು ನಿವಾಸಿ. ವಿವಾಹಿತರಾಗಿರುವ ಅವರು ಪತ್ನಿ ಹಾಗೂ ಎರಡು ತಿಂಗಳ ಮಗು ಅಗಲಿದ್ದಾರೆ.