ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಸ್ಪಷ್ಟ ಗೆಲುವು ದೊರೆಯುವುದು ಖಾತ್ರಿಯಾಗಿದೆ.
ಮಧ್ಯಾಹ್ನ 12 ಗಂಟೆಯ ವೇಳೆಗೆ ಬಿ.ವೈ. ರಾಘವೇಂದ್ರ ಅವರು 4,79,846 ಮತಗಳನ್ನು ಪಡೆದಿದ್ದರೇ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಗೀತಾ ಶಿವರಾಜಕುಮಾರ್ ಅವರು 3,42,379 ಮತಗಳನ್ನು ಪಡೆದುಕೊಂಡಿದ್ದಾರೆ. 1,40,000ಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು 18,494 ಮತಗಳನ್ನು ಪಡೆದುಕೊಂಡಿದ್ದಾರೆ.
ಬಿ.ವೈ. ರಾಘವೇಂದ್ರ ಅವರ ಗೆಲುವಿನ ಮುನ್ಸೂಚನೆ ದೊರೆಯುತ್ತಿದ್ದಂತೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರೇ, ಅವರ ಕುಟುಂಬಿಕರು ಆರತಿ ಬೆಳಗಿ ಸ್ವಾಗತಿಸಿಕೊಂಡರು.