ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಟಾಸ್ಕ್‌ಪೋರ್ಸ್ ಸಮಿತಿ ಸಭೆ ಸಮಾರಂಭವು ಗಂಗೊಳ್ಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ ನಡೆಯಿತು.
ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ವೀಣಾ ಜಿ.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಮ್ಯಾಂಗನೀಸ್ ವಾರ್ಫ್ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ ಕಾಯಿಲೆಗಳ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಮತ್ತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪರಿಸರದಲ್ಲಿ ಸ್ವಚ್ಛತೆ ನೈರ್ಮಲ್ಯ ಕಾಪಾಡಿಕೊಳ್ಳಲು ಮತ್ತು ಮುಂಗಾರು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ನಿರ್ಧರಿಸಲಾಯಿತು. ಇದೇ ಸಂದರ್ಭ ಡೆಂಗ್ಯೂ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಬಂದರು ಇಲಾಖೆ ಅಧಿಕಾರಿ ಗೌಸ್ ಅಲಿ, ಗಂಗೊಳ್ಳಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಸಂಜೀವ ಅರಕೇರಿ, ಪೊಲೀಸ್ ಸಿಬ್ಬಂದಿ ಕೇಶವ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ ಎಚ್., ಗ್ರಾಮ ಆಡಳಿತಾಧಿಕಾರಿ ಅಂಜಿನಪ್ಪ ಎಸ್., ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇನ್ನಿತರು ಉಪಸ್ಥಿತರಿದ್ದರು.