Site icon Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ.

ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

Exit mobile version