Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ| ಬಿ.ಬಿ. ಹೆಗ್ಡೆ ಕಾಲೇಜು: ಬ್ರಹ್ಮಾವರದ “ಅಪ್ಪ ಅಮ್ಮ ಅನಾಥಾಲಯ”ಕ್ಕೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಭೇಟಿ ನೀಡಲಾಯಿತು.

ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ  ಹಾಗೂ  ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. 

ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ   ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version