Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಮಾಣಿಕ ಸೇವೆಯನ್ನು ಸಮಾಜ ಎಂದಿಗೂ ಗುರುತಿಸುತ್ತದೆ: ಆಶಾ ಶಿವರಾಮ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶೋಭಾ ಸಿ. ಶೆಟ್ಟಿಯವರಿಗೆ ‘ಕಾಯಕ ಯೋಗಿʼ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕುಂದಾಪುರದ ಲಯನ್ಸ್ ಕ್ಲಬ್ ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಮ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ಸೇವೆಯನ್ನು ಸಮಾಜ ಗುರುತಿಸುತ್ತದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಬಗ್ಗೆ ಗೌರವನ್ನು ಬೆಳೆಸಿಕೊಂಡು ಸತ್ಪಂಜೆಗಳಾಗಿ ಎಂದು ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ರಾಜ್ಯ ಮತ್ತು ಅಂತರ್-ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಾಧಕ ಎನ್.ಎಸ್.ಎಸ್. ಸ್ವಯಂಸೇವಕರನ್ನು ಗೌರವಿಸಲಾಯಿತು.

ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಸನ್ಮಾನಿತ ಸ್ವಯಂಸೇವಕರ ಪಟ್ಟಿ ವಾಚಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಪ್ರತಿನಿಧಿ ಶೃದ್ಧಾ ಆರ್. ಕಾರ್ಯಕ್ರಮ ನಿರೂಪಿಸಿ, ಶ್ರೇಯಾ ಖಾರ್ವಿ ಪ್ರಾರ್ಥಿಸಿದರು.

Exit mobile version