ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು,ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರರವರು ಮಾತನಾಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಕುರಿತು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಸಂಪನ್ಮೂಲ ವ್ಯಕ್ತಿಗಳಾದ ಸಿ.ಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇರಬೇಕು, ಜ್ಞಾನದ ಹಸಿವು ಇದ್ದಾಗ ಮಾತ್ರ ಜೀವನದಲ್ಲಿ ಸಾಧಿಸಲು ಸಾಧ್ಯ ಹಾಗೂ ಶಿಕ್ಷಣದ ಜೊತೆಗೆ ಆತ್ಮಗೌರವವನ್ನು ಬೆಳೆಸಿಕೊಳ್ಳವುದು ಮುಖ್ಯ ಎನ್ನುತ್ತಾ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಸಮಗ್ರವಾಗಿ ಮಾಹಿತಿ ನೀಡಿದರು.
ಸಮಾರಂಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರುಉಪಸ್ಥಿತರಿದ್ದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿಯವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ರಂಜಿತಾ ಹೆಗ್ಡೆ ವಂದಿಸಿದರು.

