Kundapra.com ಕುಂದಾಪ್ರ ಡಾಟ್ ಕಾಂ

ಭಾರತೀಯ ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಅಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1. 2 (ಎ), 3 (ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2024ರ ಜುಲೈ 10 ಕ್ಕೆ ಅನ್ವಯವಾಗುವಂತೆ 2004 ರ ಜುಲೈ 10 ರಿಂದ 2007 ರ ಜುಲೈ 10 ರ ನಡುವಿನ ಅವಧಿಯಲ್ಲಿ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್  https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 805077000 ಹಾಗೂ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version