Site icon Kundapra.com ಕುಂದಾಪ್ರ ಡಾಟ್ ಕಾಂ

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಅಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಹಾಗೂ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/ 298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/ 298134  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version