Site icon Kundapra.com ಕುಂದಾಪ್ರ ಡಾಟ್ ಕಾಂ

ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟ: ಡಾ| ಬಿ.ಬಿ ಹೆಗ್ಡೆ ಕಾಲೇಜು ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಾರ್ಕೂರು ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜು ತಂಡದ ಎದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇವರಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ತಂಡವನ್ನು ಅಭಿನಂದಿಸಿದ್ದಾರೆ.

Exit mobile version