Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಎನ್.ಸಿ.ಸಿ ಕೆಡೆಟ್ರವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಓಂ ಯೋಗ ವಿದ್ಯಾಮಂದಿರದ ಯೋಗ ಗುರುಗಳಾದ ಬಿ.ಅಣ್ಣಪ್ಪ ಶೆಟ್ಟಿಗಾರ   ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ  ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸುವಂತೆ ಮಕ್ಕಳಿಗೆ ತಿಳಿಸಿದರು.

ಪತಂಜಲಿ ಯೋಗ ವಿದ್ಯಾಕೇಂದ್ರದ ಯೋಗ ಗುರುಗಳಾದ ರಘುವೀರ ನಗರಕರ್ ನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಮಣ್ಯ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ  ಕೃಷ್ಣ ಅಡಿಗರವರು ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತರವರು ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ರವರಿಂದ ಯೋಗಾಭ್ಯಾಸ ನಡೆಯಿತು. ಸಂಸ್ಥೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

Exit mobile version