Site icon Kundapra.com ಕುಂದಾಪ್ರ ಡಾಟ್ ಕಾಂ

ಚರ್ಮಗಂಟು ರೋಗ ತಡೆಗೆ ಜಾನುವಾರುಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿ ಜಿಲ್ಲೆಯಾದ್ಯಂತ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜುಲೈ 27 ರವರೆಗೆ ಆಯೋಜಿಸಲಾಗಿದೆ.

ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಕೂಡಾ ಈ ಬಾರಿಯೂ ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯಲ್ಲಿರುವ ಜಾನುವಾರುಗಳನ್ನು ಚರ್ವಗಂಟು ರೋಗದಿಂದ ರಕ್ಷಿಸಬೇಕು.

ಈ ಬಗ್ಗೆ ಹೈನುಗಾರರು ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version