Kundapra.com ಕುಂದಾಪ್ರ ಡಾಟ್ ಕಾಂ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಆಚರಿಸಲಾಯಿತು.

ಶಾಲಾ ಯೋಗ ಶಿಕ್ಷಕಿ ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು. ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಧನ್ವಿ ಮರವಂತೆ, ತನ್ವಿತಾ, ನಿರೀಕ್ಷಾ ಇವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು.

ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಜನತಾ ಸಮೂಹ ವಿದ್ಯಾ ಸಂಸ್ಥೆಗಳ  ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Exit mobile version