Kundapra.com ಕುಂದಾಪ್ರ ಡಾಟ್ ಕಾಂ

ಬಸ್ರೂರು: ಓಂ ಶ್ರೀ ಯೋಗ ಕೇಂದ್ರದಿಂದ ಯೋಗ ದಿನಾಚರಣೆ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಬಸ್ರೂರು ಓಂ ಶ್ರೀ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ .ರಾಧಾಕೃಷ್ಣ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ನಿತ್ಯದ  ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿದರು.

2023 -24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90 ಪ್ರತಿಶತ ಹಾಗೂ ಅಧಿಕ ಅಂಕವನ್ನು ಗಳಿಸಿದ ಬಸ್ರೂರು ಗ್ರಾಮದ  ಸಾಧಕ ವಿದ್ಯಾರ್ಥಿ ಗಳಾದ ವಿಭಾ, ಸ್ಪಂದನ ಉಳ್ಳೂರು, ಸಾನಿಕಾ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಅನಿಲ್ ಕುಮಾರ್ ಶೆಟ್ಟಿ ಹಾಗೂ ನಿರುಪಮ ಹೆಗ್ಡೆ ಉಪಸ್ಥಿತರಿದ್ದರು.

ಓಂ ಶ್ರೀ ಯೋಗ ಕೇಂದ್ರದ ಅಧ್ಯಕ್ಷರಾದ ಪ್ರಭಾಕರ್ ಐತಾಳ್ ಸ್ವಾಗತಿಸಿದರು. ಕಾರ್ಯದರ್ಶಿ ಅಶೋಕ್ ಕೆರೆಕಟ್ಟೆ ವಂದಿಸಿದರು. ಶಿಕ್ಷಕಿ ಸಾರಿಕಾ ಅಶೋಕ್ ನಿರೂಪಿಸಿದರು.

Exit mobile version