Kundapra.com ಕುಂದಾಪ್ರ ಡಾಟ್ ಕಾಂ

ಪಿಎಂಇಜಿಪಿ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಅಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ನಿರುದ್ಯೋಗಿ ಯುವಕ ಹಾಗೂ ಯುವತಿಯರು ಗರಿಷ್ಠ ಯೋಜನಾ ವೆಚ್ಚ ರೂ. 50 ಲಕ್ಷ ರೂ. ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20 ಲಕ್ಷ ರೂ. ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, ಯೋಜನಾ ವೆಚ್ಚದ ಶೇ.90 ರಿಂದ 95 ರಷ್ಟು ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಲಾಗುವುದು. ಯೋಜನಾ ವೆಚ್ಚದ ಮೇಲೆ ಶೇ.15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.

ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಉತ್ಪಾದನಾ ಘಟಕವಾಗಿದ್ದಲ್ಲಿ 10 ಲಕ್ಷ ರೂ. ಮತ್ತು ಸೇವಾ ಘಟಕವಾಗಿದ್ದಲ್ಲಿ 5 ಲಕ್ಷ ರೂ. ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚಗಳನ್ನೊಳಗೊಂಡ ಘಟಕಗಳನ್ನು ಸ್ಥಾಪಿಸುವವರು ಕನಿಷ್ಠ 8ನೇ ತರಗತಿ ಉತ್ತೀರ್ಣವಾಗಿರಬೇಕು.

ನಿರುದ್ಯೋಗಿ ಯುವಕ ಹಾಗೂ ಯುವತಿಯರು ವೆಬ್‌ಸೈಟ್ https://www.kviconline.gov.in/pmegpeportal/jsp/pmegponline.jsp ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ತಪ್ಪದೇ ಅಪ್‌ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣೀಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885, 080-25665883 ಹಾಗೂ ಪ್ರಾದೇಶಿಕ ಕಚೇರಿ, ಕಾಯರ್ ಬೋರ್ಡ್, ಪೀಣ್ಯಾ ಕೈಗಾರಿಕಾ ಪ್ರದೇಶ, ಬೆಂಗಳೂರು ದೂ.ಸಂಖ್ಯೆ: 080-28375023  ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version