ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಸ್ವರ್ಣೋದ್ಯಮಿ ಮೋಹನ್ ರೇವಣ್ಕರ್ ಆಯ್ಕೆಯಾಗಿದ್ದಾರೆ.
ಶಿರೂರು ನಿವಾಸಿಯಾಗಿರುವ ಮೋಹನ್ ರೇವಣ್ಕರ್ ಅವರು ತಮ್ಮ ಉದ್ಯಮದ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಪ್ರಸ್ತುತ ಸಾಲಿನ ಕಾರ್ಯದರ್ಶಿಯಾಗಿ ಸುನಿಲ್ ಹೆಚ್. ಜಿ. ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

