Site icon Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಮಲೇರಿಯಾ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ಕೊಲ್ಲೂರು ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ ಇವರ ಸಹಯೋಗದಲ್ಲಿ ದಳಿ ಜಟ್ಟಿಗೇಶ್ವರ ಸಮುದಾಯ ಭವನದಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಶೇರುಗಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಗಿಡ ನೆಡುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ. ಶ್ರೀಕಾಂತ್ , ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ್ ಜೆ. ರಾವ್, ಇವರು ಡೆಂಗ್ಯೂ ಮಲೇರಿಯದಿಂದ ಹರಡುವ ಕಾಯಿಲೆಗಳ ಬಗ್ಗೆ ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಆರೋಗ್ಯ ಮಾಹಿತಿಯನ್ನ ನೀಡಿದರು.

ಸುಮತಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ವಾಗತಿಸಿದರು, ಕೊಲ್ಲೂರು ವನ್ಯಜೀವಿ ವಿಭಾಗದ ಉಪ ವಲಯ ಅರಣ್ಯ ಅಧಿಕಾರಿ ಸಂಪತ್ ಶಾಸ್ತ್ರಿ ಧನ್ಯವಾದ ಸಮರ್ಪಣೆ ಮಾಡಿದರು. ಸಭೆಯಲ್ಲಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸ್ಥಳೀಯನಾಗರೀಕರು ಭಾಗವಹಿಸಿದ್ದರು.

Exit mobile version