Kundapra.com ಕುಂದಾಪ್ರ ಡಾಟ್ ಕಾಂ

ಬೈಕ್ ಡಿಕ್ಕಿಯಾಗಿ ವೃದ್ಧ ವೆಂಕಪ್ಪ ಕಿಣಿ ಸಾವು

ಕುಂದಾಪುರ: ನಗರದ ಪಾರಿಜಾತ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಜೆಯ ವೇಳೆಗೆ ನಡೆದಿದೆ. ಕುಂದಾಪುರದ ಬರೆಕಟ್ಟು ನಿವಾಸಿ ವೆಂಕಪ್ಪ ಕಿಣಿ (70) ದುರ್ದೈವಿ

ಸಂಜೆ ವೆಂಕಪ್ಪ ಕಿಣಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾರಿಜಾತ ವೃತ್ತದ ಕಡೆಯಿಂದ ಹೊಸ ಬಸ್ ನಿಲ್ದಾಣದ ಕಡೆಗೆ ನಾಗರತ್ನ ಎಂಬುವರು ಬೈಕಿನಲ್ಲಿ ಬಂದು ಪಾದಾಚಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ತೀವ್ರತೆಗೆ ವೆಂಕಪ್ಪ ಕಿಣಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸುತ್ತಿರುವ ವೇಳೆಗೆ ಮಾರ್ಗ ಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version