Kundapra.com ಕುಂದಾಪ್ರ ಡಾಟ್ ಕಾಂ

ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.

ಆದ್ದರಿಂದ ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂರಸ್ ಗುರುತಿನ ಚೀಟಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಆಧಾರಕಾರ್ಡ್ ನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version