Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಡಿಪಿಐ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ದ ಗಂಗೊಳ್ಳಿಯಲ್ಲಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಎನ್‌ಡಿಎ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿದ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೈಂದೂರು ಕ್ಷೇತ್ರ ಸಮಿತಿ ವತಿಯಿಂದ ಗಂಗೊಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಸ್‌ಡಿಪಿಐ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ತೌಫೀಕ್ ಬ್ಯಾರಿ ಅವರು ಮಾತನಾಡಿ, ಬಿಜೆಪಿ ಸರಕಾರ ಬಂದ ನಂತರ  ಗುಂಪು ಹತ್ಯೆಯಂತಹ ಘೋರವಾದ ಕೃತ್ಯಕ್ಕೆ ಚಾಲನೆ ನೀಡಿದಂತಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಇಂತಹ ಕೃತ್ಯ ಮರುಕಳಿಸಿದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಿದ್ದೀಕ್ ಗಂಗೊಳ್ಳಿ, ಜೊತೆ ಕಾರ್ಯದರ್ಶಿ ಸಮೀರ್ ಗಂಗೊಳ್ಳಿ, ಗಂಗೊಳ್ಳಿ ಗ್ರಾಮ ಸಮಿತಿ ಅಧ್ಯಕ್ಷರಾದ ರಜಬ್ ಗಂಗೊಳ್ಳಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Exit mobile version