Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಉಡುಪಿ ಜಿಲ್ಲಾಸ್ಪತ್ರೆಯ ನೇತೃ ತಜ್ಞ ಡಾ. ನಿತ್ಯಾನಂದ ನಾಯಕ್, ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಕಣ್ಣಿನ ರೋಗಗಳ ಬಗ್ಗೆ ಅರಿವು ಮೂಡಿಸಿಕೊಂಡು, ಕಾಲ ಕಾಲಕ್ಕೆ ನೇತ್ರ ತಜ್ಞರ ಮೂಲಕ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. ಮಧುಮೇಹ, ಬಿಪಿ ಮೊದಲಾದ ಕಾಯಿಲೆ ಇದ್ದವರು ಕಣ್ಣಿನ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದರು.

ನೇತ್ರ ತಜ್ಞ ಡಾ. ಶಮಿತ್, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಲಲಿತಾ ಖಾರ್ವಿ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್ ಸ್ವಾಗತಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಆರೋಗ್ಯ ಸಹಾಯಕಿ ಶೋಭಾ ವಂದಿಸಿದರು.

Exit mobile version