Site icon Kundapra.com ಕುಂದಾಪ್ರ ಡಾಟ್ ಕಾಂ

ಜುಲೈ 19ರಂದು ಉಡುಪಿ ಜಿಲ್ಲಾದ್ಯಂತ ಶಾಲೆ – ಪಿಯು ಕಾಲೇಜುಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.18:
ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 19ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Exit mobile version