Kundapra.com ಕುಂದಾಪ್ರ ಡಾಟ್ ಕಾಂ

ಅಗಸ್ಟ್ 1ರಂದು ಉಡುಪಿ ಜಿಲ್ಲಾದ್ಯಂತ ಶಾಲೆ – ಪಿಯು ಕಾಲೇಜುಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.31: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 01ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. ಜುಲೈ 31ರ ಮಧ್ಯಾಹ್ನದಿಂದ ಭಾರಿ ಮಳೆಯಾಗುತ್ತಿದ್ದು, ಅಗಸ್ಟ್ 1ರಂದು ಭಾರಿ ಮಳೆಯ ಮುನ್ಸೂಚನೆ ಇದೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ. 1077 ಹಾಗೂ 0820-2574802 ಅನ್ನು ಸಂಪರ್ಕಿಸಬಹುದಾಗಿದೆ

Exit mobile version