Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಪ್ರಥಮ ಹಂತದ ಸಾಮಾಜಿಕ ಪರಿಶೋಧನ ವಿಶೇಷ ಗ್ರಾಮ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ 2024-25ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಮಧುಕರ, ಸರಕಾರದ ವಿವಿಧ ಇಲಾಖೆಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ವಹಿಸಿದ ಕಾಮಗಾರಿಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಕಾಮಗಾರಿಗಳಲ್ಲಾದ ಲೋಪದೋಷಗಳನ್ನು ತಿಳಿದುಕೊಳ್ಳಲು ಹಾಗೂ ಕಾಮಗಾರಿಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರ ಅಹವಾಲು ಆಲಿಸಲು ಈ ವಿಶೇಷ ಗ್ರಾಮಸಭೆ ಸಹಕಾರಿಯಾಗಲಿದೆ ಎಂದರು.

ಕುಂದಾಪುರ ಅಮೂಲ್ಯ ಸಾಕ್ಷರತಾ ಕೇಂದ್ರದ ಆಶಾಲತಾ ಬ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ, ಗ್ರಾಪಂ ಲೆಕ್ಕ ಸಹಾಯಕ ಶೇಖರ ಜಿ., ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸುರೇಂದ್ರ, ತಾಂತ್ರಿಕ ಸಹಾಯಕ ದೀಕ್ಷಿತ್, ಬಿಇಟಿ ಜ್ಯೋತಿ  ಮೊದಲಾದವರು ಉಪಸ್ಥಿತರಿದ್ದರು.

ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version