Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪಿ.ಎಂ. ಸ್ವ-ನಿಧಿ ಯೋಜನೆ: ಅರ್ಜಿ ಅಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ನಗರ ಪ್ರದೇಶದಲ್ಲಿ 2020ರ ಮಾರ್ಚ್ 24ರ ಪೂರ್ವದಲ್ಲಿ ಬೀದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಸ್ಥರು ಮತ್ತು ಮನೆ ಮನೆಗೆ ದಿನಪತ್ರಿಕೆ ವಿತರಣೆ, ಹಾಲು ವಿತರಣೆ ವೃತ್ತಿಯಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯಾಪಾರ /ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ ಹಾಗೂ ಪುನರ್ ಸ್ಥಾಪನೆಗಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಹಂತದಲ್ಲಿ ತಲಾ ರೂ.10,000 ರೂ.20,000 ಮತ್ತು ರೂ.50,000 ಸಾಲ ಸೌಲಭ್ಯವನ್ನು 7% ಬಡ್ಡಿ ದರದಲ್ಲಿ ಬ್ಯಾಂಕ್ ಮುಖೇನ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version