Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪ.ಪೂ ಕಾಲೇಜು: ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು.

ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.

ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ, ರೋಟರಿ ಸಂಸ್ಥೆಯ  ಅಸಿಸ್ಟೆಂಟ್ ಗವರ್ನರ್  ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Exit mobile version