ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್ ಸ್ವರೂಪ್) ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ನ ರಾಜ್ಯಾಧ್ಯಕ್ಷ ಡಾ. ಎನ್. ಬಾಲಾಜಿ ಅವರು ನೇಮಕ ಮಾಡಿದ್ದಾರೆ.
ಅವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಕಲಾಪ್ರತಿಭೆಗೆ ಹಲವು ಪ್ರಶಸ್ತಿಗಳು ಸಂದಿವೆ.