Site icon Kundapra.com ಕುಂದಾಪ್ರ ಡಾಟ್ ಕಾಂ

ವಿವಿಧ ಹುದ್ದೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಬಹು ಕಾರ್ಯಕ ಸಿಬ್ಬಂದಿ (ತಾಂತ್ರಿಕೇತರ) ಎಂ.ಟಿ.ಎಸ್ ಮತ್ತು ಹವಾಲ್ದಾರ್ (ಸಿ.ಬಿ.ಐ.ಸಿ & ಸಿ.ಬಿ.ಎನ್.) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2024ರ ಆಗಸ್ಟ್ 01 ರಂತೆ  ಎಂ.ಟಿ.ಎಸ್ ಹುದ್ದೆಗಳಿಗೆ 18 ರಿಂದ 25 ಹಾಗೂ ಹವಾಲ್ದಾರ್ ಹುದ್ದೆಗಳಿಗೆ 18 ರಿಂದ 27 ವರ್ಷಗಳ ನಿರ್ದಿಷ್ಠ ವಯೋಮಿತಿ ಹೊಂದಿರುವುದರೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆನ್‌ಲೈನ್ ನೊಂದಣಿಗೆ ಜುಲೈ 31 ಕೊನೆ ದಿನ.  ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version