ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ.ಕಿಸಾನ್ ಪೋರ್ಟಲ್ ರಡಿ ಅಗತ್ಯ ದಾಖಲಾತಿಗಳೋಂದಿಗೆ ಎಫ್.ಐ.ಡಿ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.